Publish Date: Wed, 29 Mar 2023 (08:50 IST)
Updated Date: Wed, 29 Mar 2023 (09:07 IST)
ಹೈದರಾಬಾದ್: ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ಈಗ ತೆಲುಗಿನಲ್ಲೇ ಬೀಡುಬಿಟ್ಟಿದ್ದಾರೆ. ಸಲಾರ್ ಬಳಿಕ ಜ್ಯೂ.ಎನ್ ಟಿಆರ್ ಗೆ ನಿರ್ದೇಶನ ಮಾಡುತ್ತಿದ್ದಾರೆ.
ಇದರ ನಡುವೆ ಮತ್ತೊಂದು ಸುದ್ದಿ ಕೇಳಿಬಂದಿದೆ. ಆರ್ ಆರ್ ಆರ್ ಸ್ಟಾರ್ ರಾಮ್ ಚರಣ್ ತೇಜ ಮುಂದಿನ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಯಿದೆ.
ಪ್ರಶಾಂತ್ ನೀಲ್ ಇದರೊಂದಿಗೆ ತೆಲುಗಿನಲ್ಲಿ ಮತ್ತಷ್ಟು ಬ್ಯುಸಿಯಾಗಲಿದ್ದಾರೆ. ಸದ್ಯಕ್ಕೆ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಅದಾದ ಬಳಿಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡಬಹುದು.