ಬೆಂಗಳೂರು: ಮದುವೆಯಾದ ಬಳಿಕ ಹಲವು ಮಹಿಳಾ ಪ್ರಧಾನ, ಸದಭಿರುಚಿಯ ಪಾತ್ರಗಳಲ್ಲಿ ಮಿಂಚುತ್ತಿರುವ ನಟಿ ಪ್ರಿಯಾಂಕ ಉಪೇಂದ್ರ ಈಗ ಮತ್ತೊಂದು ವಿಭಿನ್ನ ಪಾತ್ರದೊಂದಿಗೆ ಜನರ ಎದುರಿಗೆ ಬರಲು ಸಿದ್ಧವಾಗಿದ್ದಾರೆ.
ಪ್ರಿಯಾಂಕ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಮಿಸ್ ನಂದಿನಿ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ ನೀಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾಂಕ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.
ಈ ಸಿನಿಮಾಗೆ ಗುರುದತ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರಿಯಾಂಕ ಜೊತೆಗೆ ಅಪರ್ಣಾ, ಕೆ.ಪಿ. ಶ್ರೀಧರ್, ಸೂರಜ್ ಮುಂತಾದವರು ಪಾತ್ರ ಮಾಡುತ್ತಿದ್ದಾರೆ. ಮುಂದಿನ ವರ್ಷ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ.