Publish Date: Sun, 31 Oct 2021 (08:58 IST)
Updated Date: Sun, 31 Oct 2021 (09:01 IST)
ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ (ಅ.31) ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ.
ರಾಜ್ಕುಮಾರ್ ಕುಟುಂಬದವರು ಈಡೀಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್ಕುಮಾರ್ ಪುತ್ರ ವಿನಯ್ ರಾಜ್ಕುಮಾರ್ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ತಂದೆ ಡಾ. ರಾಜ್ಕುಮಾರ್, ತಾಯಿ ಪಾರ್ವತಮ್ಮ ಸಮಾಧಿಯ ಪಕ್ಕದಲ್ಲೇ ಪುನೀತ್ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಗಿದೆ.
ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ, ಸಹೋದರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.