ನಾಳೆ ನಟ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ. ಈ ಬಗ್ಗೆ ರಾಜ್ಕುಮಾರ್ ಕುಟುಂಬಸ್ಥರ ಜತೆ ಚರ್ಚಿಸಿದ್ದೇವೆ. ಇಂದು ಇಡೀ ದಿನ ದರ್ಶನ ಪಡೆಯುವುದಕ್ಕೆ ಅವಕಾಶವಿದೆ. ಅಭಿಮಾನಿಗಳು ಶಾಂತಿಯುತವಾಗಿ ಬಂದು ದರ್ಶನ ಪಡೆಯಿರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.