Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪುನೀತ್ ಅಂತ್ಯ ಸಂಸ್ಕಾರ : ಸಂಚಾರ ಮಾರ್ಗದಲ್ಲಿ ಏನ್ನೆಲ್ಲ ಬದಲಾವಣೆ?

ಪುನೀತ್ ಅಂತ್ಯ ಸಂಸ್ಕಾರ : ಸಂಚಾರ ಮಾರ್ಗದಲ್ಲಿ ಏನ್ನೆಲ್ಲ ಬದಲಾವಣೆ?
ಬೆಂಗಳೂರು , ಶನಿವಾರ, 30 ಅಕ್ಟೋಬರ್ 2021 (14:33 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶವಾದ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕಂಠೀರವ ಕ್ರೀಡಾಂಗಣದಿಂದ ಆರ್ಆರ್ಎಂಆರ್ ರಸ್ತೆ, ಹಡ್ಸನ್ ಸರ್ಕಲ್, ಪೊಲೀಸ್ ಕಾರ್ನರ್, ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಪೋಸ್ಟ್ ಆಫೀಸ್ ರಸ್ತೆ, ಕೆ.ಆರ್.ಸರ್ಕಲ್ ಎಡ ತಿರುವು, ಶೇಷಾದ್ರಿ ರಸ್ತೆ, ಮಹಾರಾಣಿ ಮೇಲ್ಸೇತುವೆ, ಸಿಐಡಿ ಜಂಕ್ಷನ್, ಚಾಲುಕ್ಯ ವೃತ್ತ, ಹಳೇ ಹೈಗ್ರೌಂಡ್ಸ್ ಜಂಕ್ಷನ್, ಟಿ.ಚೌಡಯ್ಯ ರಸ್ತೆ, ವಿಂಡ್ಸರ್ ಮ್ಯಾನರ್ ಜಂಕ್ಷನ್, ಬಿಡಿಎ ಅಪ್ ಱಂಪ್, ಪಿ.ಜಿ.ಹಳ್ಳಿ ಕ್ರಾಸ್, ಕಾವೇರಿ ಜಂಕ್ಷನ್, ಬಾಷ್ಯಂ ಸರ್ಕಲ್, ಸ್ಯಾಂಕಿ ರಸ್ತೆ, ಮಲ್ಲೇಶ್ವರಂ 18ನೇ ಕ್ರಾಸ್, ಮಾರಮ್ಮ ವೃತ್ತ, ಬಿಹೆಚ್ಇಎಲ್ ಸರ್ವೀಸ್ ರಸ್ತೆ, ಬಿಹೆಚ್ಇಎಲ್ ವೃತ್ತ, ಯಶವಂತಪುರ ವೃತ್ತ, ಮೆಟ್ರೋ ಷಾಪ್, ಮಾರಪ್ಪನ ಪಾಳ್ಯ, ಗೋವರ್ಧನ್ ಥಿಯೇಟರ್ ಜಂಕ್ಷನ್, ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆ, ಎಂಇಐ ಬಸ್ ನಿಲ್ದಾಣ, ಗೊರಗುಂಟೆಪಾಳ್ಯ ಜಂಕ್ಷನ್, ಸಿಎಂಟಿಐ ಜಂಕ್ಷನ್, ಲಾರಿ ಅಸೋಸಿಯೇಷನ್ ಕಚೇರಿ, ಎಫ್ಟಿಐ ವೃತ್ತ ಮಾರ್ಗದಲ್ಲಿ ಕಂಠೀರವ ಸ್ಟುಡಿಯೋಗೆ ಸ್ಥಳಾಂತರ ಮಾಡಲಾಗುತ್ತದೆ.
1)ಮೈಸೂರು ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳನ್ನು ನೈಸ್ ರಸ್ತೆ, ನಾಯಂಡಹಳ್ಳಿ, ನಾಗರಬಾವಿ ಮತ್ತು ಸುಮನಹಳ್ಳಿ ಜಂಕ್ಷನ್ಗೆ ಬದಲಾಯಿಸಿದ್ದಾರೆ.
2)ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಮೇಲುಸೇತುವೆ ಮೇಲೆ ಹೋಗುವ ವಾಹನಗಳು ಮತ್ತು ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಸಿಎಂಟಿಐ ಜಂಕ್ಷನ್.
3)ಜಾಲಹಳ್ಳಿ ಕ್ರಾಸ್ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಟಿವಿಎಸ್ ಕ್ರಾಸ್ ಮತ್ತು ಸೋನಾಲ್ ಗಾರ್ಮೆಂಟ್ಸ್ ಬಳಿ.
4)ಮಹಾಲಕ್ಷ್ಮಿ ಬಡಾವಣೆ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಕೃಷ್ಣಾನಂದ ನಗರ ಜಂಕ್ಷನ್ ಬಳಿ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ನಾಡಲ್ಲಿ ಮತ್ತೆ ಹುಟ್ಟಿ ಬರಲಿ; ನಟಿ ಉಮಾಶ್ರೀ ಕಣ್ಣೀರು!