Webdunia - Bharat's app for daily news and videos

Install App

ಪುನೀತ್ ಪ್ರತಿಮೆಗೆ ಹೆಚ್ಚಾಯ್ತು ಬೇಡಿಕೆ!

Webdunia
ಶನಿವಾರ, 11 ಡಿಸೆಂಬರ್ 2021 (14:20 IST)
ಪುನೀತ್ ರಾಜ್ಕುಮಾರ್ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ.

ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ. ಎಲ್ಲಾ ಏರಿಯಾಗಳಲ್ಲಿ ಪುನೀತ್ ಪ್ರತಿಮೆ ಸ್ಥಾಪಿಸಲು ಆಸಕ್ತಿ ತೋರಿದ್ದಾರೆ. ಆಂಧ್ರ ಪ್ರದೇಶದಲ್ಲೂ ಈ ರೀತಿ ಮಾಡಲಾಗುತ್ತಿದೆ. ಇಲ್ಲಿನ ಗುಂಟೂರು ಜಿಲ್ಲೆಯ ತೆನಾಲಿ ಜಿಲ್ಲೆಯ ಶಿಲ್ಪಿ ಕಾಟೂರಿ ವೆಂಕಟೇಶ್ವರರಾವ್ ಅವರಿಗೆ ಪುನೀತ್ ಪ್ರತಿಮೆ ನಿರ್ಮಾಣಕ್ಕೆ ಭಾರೀ ಆರ್ಡರ್ಗಳು ಬರುತ್ತಿವೆ.

ವೆಂಕಟೇಶ್ವರ್ ಅವರು ಮಕ್ಕಳಾದ ರವಿಚಂದ್ರನ್ ಮತ್ತು ಶ್ರೀ ಹರ್ಷಲಾ ಜತೆ ಸೇರಿ 3ಡಿ ಪ್ರಿಂಟಿಂಗ್ ತಂತ್ರಜ್ಞಾನದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ತಯಾರಿಸುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ 3ಡಿ ತಂತ್ರಜ್ಞಾನದಿಂದ ಮೂರ್ತಿಗಳ ತಯಾರಿಕೆ ಆರಂಭವಾಗಿದೆ.

ಈ ತಂತ್ರಜ್ಞಾನದಿಂದ 3 ಇಂಚುಗಳಿಂದ ಹಿಡಿದು 100 ಅಡಿವರೆಗೆ ಮೂರ್ತಿಗಳನ್ನು ತಯಾರಿಸಬಹುದು. ಇದರಿಂದ ಸಿದ್ಧಪಡಿಸಿದ ಮೂರ್ತಿಗಳು ತುಂಬಾನೇ ಅದ್ಭುತವಾಗಿ ಮೂಡಿ ಬರುತ್ತವೆ.  ಈಗ ಪುನೀತ್ ಅವರ ಪ್ರತಿಮೆ ನಿರ್ಮಾಣಕ್ಕೆ ಸಾಕಷ್ಟು ಆರ್ಡರ್ ಬರುತ್ತಿದ್ದು, ಇವರು ಹಗಲು ರಾತ್ರಿ ಎನ್ನದೇ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಗ್ರಾಹಕರ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments