ಬೆಂಗಳೂರು: ಇಂದು ರೆಬಲ್ ಸ್ಟಾರ್ ಜನ್ಮ ಜಯಂತಿ ಒಂದು ಕಡೆಯಾದರೆ ಇನ್ನೊಂದು ಕಡೆ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಯಲ್ಲೂ ಅವರ ಪುಣ್ಯಸ್ಮರಣೆ ಮಾಡಲಾಯಿತು.
ಪುನೀತ್ ರಾಜ್ ಕುಮಾರ್ ಅಗಲಿ 7 ತಿಂಗಳು ಕಳೆದ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರು ಇಂದು ಅಪ್ಪು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ಪತ್ನಿ ಅಶ್ವಿನಿ, ಪುತ್ರಿ ಸೇರಿದಂತೆ ಕುಟುಂಬಸ್ಥರು ಅಪ್ಪು ಸಮಾಧಿಗೆ ಭೇಟಿ ನೀಡಿದರು.
ಪುನೀತ್ ಮತ್ತು ರೆಬಲ್ ಸ್ಟಾರ್ ಅಂಬರೀಶ್ ಇಬ್ಬರ ಸಮಾಧಿಯೂ ಕಂಠೀರವ ಸ್ಟುಡಿಯೋದಲ್ಲಿ ಅಕ್ಕಪಕ್ಕದಲ್ಲೇ ಇದೆ. ಹೀಗಾಗಿ ಇಂದು ಇಬ್ಬರೂ ದಿಗ್ಗಜ ನಟರ ಸಮಾಧಿಗೂ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.