Publish Date: Sun, 13 Mar 2022 (16:26 IST)
Updated Date: Sun, 13 Mar 2022 (16:27 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ.
ಸಿನಿಮಾ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಪುನೀತ್ ಜನ್ಮದಿನಕ್ಕೆ ವಾರಕ್ಕೆ ಮೊದಲು ಈ ಗೌರವ ಲಭಿಸಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.
ಇದೇ ತಿಂಗಳು 22 ರಂದು ನಡೆಯಲಿರುವ ವಿವಿಯ 102 ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
Krishnaveni K
Publish Date: Sun, 13 Mar 2022 (16:26 IST)
Updated Date: Sun, 13 Mar 2022 (16:27 IST)