ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ.
ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಎಲ್ಲರ ಒತ್ತಾಸೆ ಮೇರೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಕಾನೂನಿಗೆ ತಿದ್ದುಪಡಿ ತಂದು ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ಪ್ರಧಾನ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.