Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ 11 ದಿನ ಕಳೆದಿವೆ. ಇಂದು ಕುಟುಂಬಸ್ಥರು 11 ನೇ ದಿನದ ಕಾರ್ಯ ನೆರವೇರಿಸಲಿದ್ದಾರೆ.
ಇಂದು ಪುನೀತ್ ನಿವಾಸದಲ್ಲಿ ಕುಟುಂಬಸ್ಥರು 11 ದಿನದ ಕಾರ್ಯ ನೆರವೇರಿಸಲಿದ್ದು, ಕೇವಲ ಆಪ್ತರು ಮಾತ್ರ ಭಾಗವಹಿಸಲಿದ್ದಾರೆ.
ಶನಿವಾರವೇ ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್ ಪುನೀತ್ ನಿವಾಸಕ್ಕೆ ಆಗಮಿಸಿ ಕಾರ್ಯಕ್ರಮದ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಪುನೀತ್ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. ಈ ಸಂಬಂಧ ಇಂದು 12 ಗಂಟೆಯವರೆಗೆ ಅಪ್ಪು ಸಮಾಧಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ.