Publish Date: Mon, 08 Nov 2021 (07:16 IST)
Updated Date: Mon, 08 Nov 2021 (08:18 IST)
ನಟ ಪುನೀತ್ ರಾಜ್ಕುಮಾರ್ ನಿಧನರಾಗಿ 11 ದಿನ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.
11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ. ಭಾನುವಾರ (ನ.7) ರಾತ್ರಿಯಿಂದಲೇ ಈ ಕಾರ್ಯಕ್ಕೆ ಸಕಲ ಸಿದ್ಧತೆ ಶುರುವಾಗಿತ್ತು. ಇಂದು ಬೆಳಗ್ಗೆಯೇ ಪುನೀತ್ ರಾಜ್ಕುಮಾರ್ ನಿವಾಸದಲ್ಲಿ ಪೂಜಾ ಕಾರ್ಯಗಳು ಆರಂಭ ಆಗಿವೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳಾದ ಧ್ರುತಿ, ವಂದಿತಾ, ಸಹೋದರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪುನೀತ್ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಲಿದ್ದಾರೆ.
ಪ್ರತಿದಿನ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಜನರು ಕಿಲೋ ಮೀಟರ್ಗಟ್ಟಲೆ ಉದ್ದದ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ದಿನವೂ ಕಂಡು ಬರುತ್ತಿದೆ. ಇಂದು 11ನೇ ದಿನದ ಕಾರ್ಯವಾದ್ದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ಸಾಧ್ಯತೆ ಇದೆ.