Webdunia - Bharat's app for daily news and videos

Install App

ದಿ ಕೇರಳ ಸ್ಟೋರಿ ಸಿನಿಮಾ ಪ್ರಸಾರಕ್ಕೆ ಬ್ರೇಕ್‌ ಹಾಕಿ: ದೂರದರ್ಶನಕ್ಕೆ ಕೇರಳ ಸಿಎಂ ಪಿಣರಾಯಿ ಕಟ್ಟಪ್ಪಣೆ

Sampriya
ಶುಕ್ರವಾರ, 5 ಏಪ್ರಿಲ್ 2024 (10:42 IST)
Photo Courtesy X
ತಿರುವನಂತಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಲಯಾಳಂನ ದಿ ಕೇರಳ ಸ್ಟೋರಿ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರವನ್ನು ತಡೆಹಿಡಿಯುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೂಚಿಸಿದ್ದಾರೆ.

ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ ಎಂದು ಡಿಡಿ ನ್ಯಾಷನಲ್‌ ಬಳಿ ಪಿಣರಾಯಿ ಕೇಳಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾ ಪ್ರಸಾರದ ನಿರ್ಧಾರದಿಂದ ಹಿಂದೆ ಸರಿಯಿರಿ. ಜನರ ಮನಸ್ಸಿನಲ್ಲಿ ದ್ವೇಷ ತುಂಬುವ ಇಂತಹ ಚಲನಚಿತ್ರಗಳ ಪ್ರದರ್ಶನ ಖಂಡನೀಯ. ಇಂತಹ ದುರುದ್ದೇಶಪೂರಿತ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕೇರಳ ದೃಢವಾಗಿ ನಿಲ್ಲುತ್ತದೆ ಎಂದು  ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರವು ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಲವ್ ಜಿಹಾದ್‌ಗೆ ಸಂಬಂಧಿಸಿದ ಚಿತ್ರಕಥೆಯನ್ನು ಈ ಚಿತ್ರ ಹೊಂದಿದೆ ಎನ್ನಲಾಗಿದ್ದು, ‌ಏಪ್ರಿಲ್‌ 5 ರಂದು ಈ ಸಿನಿಮಾವನ್ನು ಪ್ರಸಾರ ಮಾಡುವುದಾಗಿ ದೂರದರ್ಶನ ಹೇಳಿಕೊಂಡಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments