ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜದಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರ ಮಾಡುತ್ತಿದ್ದಾರೆ.
ಆದರೆ ಸುದೀಪ್ ಚಿತ್ರತಂಡದೊಂದಿಗಿನ ಮನಸ್ತಾಪದಿಂದಾಗಿ ಚಿತ್ರದಿಂದ ಹೊರಬಂದಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಇದಕ್ಕೀಗ ನಿರ್ದೇಶಕ ಆರ್. ಚಂದ್ರು ಸ್ಪಷ್ಟನೆ ನೀಡಿದ್ದಾರೆ.
ಸುದೀಪ್ ಕಬ್ಜ ಸಿನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾದುದು. ಕಿಚ್ಚ ಸುದೀಪ್ ಅವರು ಈಗಾಗಲೇ ಕಬ್ಜ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ದಯವಿಟ್ಟು ಈ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಚಂದ್ರು ಸ್ಪಷ್ಟನೆ ನೀಡಿದ್ದಾರೆ.