Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ತಾಯಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಘು ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಘು ದೀಕ್ಷಿತ್ ಕಾರ್ಯಕ್ರಮ ನಿಮಿತ್ತ ದುಬೈಗೆ ತೆರಳಿದ್ದರು. ಇದೀಗ ತಮ್ಮ ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.