ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಜನವರಿ 8 ರಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.
ಈಗಾಗಲೇ ನಟಿ ಸಂಜನಾ ಗಲ್ರಾನಿ, ಡ್ರಗ್ ಪೆಡ್ಲರ್ ವೀರೇಶ್ ಖನ್ನಾಗೆ ಹೈಕೋರ್ಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ರಾಗಿಣಿ ಕೂಡಾ ಜನವರಿ 8 ಕ್ಕೆ ತಮಗೆ ಅನುಕೂಲಕರವಾದ ತೀರ್ಪು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ರಾಗಿಣಿ ಜಾಮೀನು ಅರ್ಜಿಯನ್ನು ಈ ಮೊದಲು ಹೈಕೋರ್ಟ್ ತಳ್ಳಿ ಹಾಕಿತ್ತು. ಇದಾದ ಬಳಿಕ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.