ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಕೆಲವೇ ಹೊತ್ತಿನಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದಾರೆ.
ನಟಿಯರಿಬ್ಬರನ್ನೂ ಸಾಂತ್ವನ ಕೊಠಡಿಯಲ್ಲಿ ಜತೆಗೇ ಇರಿಸಲಾಗಿತ್ತು. ಇದೀಗ ಕೆಲವೇ ಹೊತ್ತಿನಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆ ಆರಂಭಿಸಲಿದ್ದು, ಅದಾದ ಬಳಿಕ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ. ಇದಾದ ಬಳಿಕ ಮತ್ತೊಂದು ಸುತ್ತಿನ ವಿಚಾರಣೆ ನಡೆಯುವ ಸಾಧ್ಯತೆಯಿದೆ.