Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಹಿರಿಯ ರಾಜೇಶ್ ಇಂದು (ಶನಿವಾರ, ಫೆ.19) ಮುಂಜಾನೆ ನಿಧನರಾಗಿದ್ದಾರೆ.
ಅವರ ಕುರಿತು ಹಾಗೂ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಈ ದಿನ ದುಃಖಕರವಾದ ದಿನ ಎಂದಿರುವ ಅರ್ಜುನ್ ಸರ್ಜಾ, ಕನ್ನಡ ಚಿತ್ರರಂಗದಲ್ಲಿ 50 ವರ್ಷಕ್ಕೂ ಹೆಚ್ಚು ಇದ್ದವರು ರಾಜೇಶ್. ಡಾ.ರಾಜ್ಕುಮಾರ್ರವರ ಪಂಕ್ತಿಯವರು.
ಮನಸ್ಸಿಗೆ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. ರಾಜೇಶ್ ಅವರ ಕೊನೆಯ ದಿನಗಳ ಕುರಿತು ಮಾಹಿತಿ ನೀಡಿದ ಅರ್ಜುನ್ ಸರ್ಜಾ, 10 ದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. ಮೊದಲಿಗೆ ಪ್ರೋ ಕೋವಿಡ್ ಆಮೇಲೆ ಸಿಕೆಡಿ ಸಮಸ್ಯೆ ಆಗಿತ್ತು.
ವಿದ್ಯಾರಣ್ಯಪುರ ಸ್ವನಿವಾಸದಲ್ಲಿ ಪೂಜೆ ನಡೆಯಲಿದೆ. 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಮಧ್ಯಾಹ್ನ 3.30ಕ್ಕೆ ಮೇಡಿ ಅಗ್ರಹಾರ ಲಕ್ಷ್ಮೀಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆಯಬಹುದು ಎಂದು ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.