Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಜನಿ: ಆದ್ರೆ ತಲೈವಾಗೆ ಒಂದು ಷರತ್ತು!

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಜನಿ: ಆದ್ರೆ ತಲೈವಾಗೆ ಒಂದು ಷರತ್ತು!
ಹೈದರಾಬಾದ್ , ಭಾನುವಾರ, 27 ಡಿಸೆಂಬರ್ 2020 (16:35 IST)
ಹೈದರಾಬಾದ್: ರಕ್ತದೊತ್ತಡ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


ಮೊನ್ನೆಯಷ್ಟೇ ಅವರು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ, ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಬಳಿಕ ಅಪೋಲೋ ಆಸ್ಪತ್ರೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಈಗ ಅವರ ಆರೋಗ್ಯ ಸುಧಾರಿಸಿದೆ. ಆದರೆ ಮುಂದಿನ ಒಂದು ವಾರ ಅವರು ಸಂಪೂರ್ಣ ಬೆಡ್ ರೆಸ್ಟ್ ಮಾಡಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಒತ್ತಡಕ್ಕೊಳಗಾಗುವಂತ ಕೆಲಸ, ಚಟುವಟಿಕೆಯಲ್ಲಿ ಭಾಗಿಯಾಗಬಾರದು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೂಪರ್ ಸ್ಟಾರ್ ರಜನಿ ಆರೋಗ್ಯದ ಲೇಟೆಸ್ಟ್ ಮಾಹಿತಿ