ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಚಾರ್ಲಿ 777 ಸಿನಿಮಾದ ಅಂತಿಮ ಹಂತದ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ತೆರಳಲಿದ್ದಾರೆ.
ಕಿರಣ್ ರಾಜ್ ನಿರ್ದೇಶನದ ಈ ಸಿನಿಮಾ ಟ್ರಾವೆಲ್ ಬೇಸ್ ಕತೆ ಹೊಂದಿದ್ದು, ಹೀಗಾಗಿ ಗೋವಾ, ತಮಿಳುನಾಡು ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಇದೀಗ ಅಂತಿಮ ಹಂತದ ಚಿತ್ರೀಕರಣ ನವಂಬರ್ 26 ರಿಂದ ಕಾಶ್ಮೀರದಲ್ಲಿ ನಡೆಯಲಿದೆ. ಸುಮಾರು 50 ಕ್ಕೂ ಹೆಚ್ಚು ಜನರ ಚಿತ್ರತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಲಿದೆ.