Publish Date: Sun, 10 Apr 2022 (19:08 IST)
Updated Date: Sun, 10 Apr 2022 (19:10 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಚಾರ್ಲಿ 777 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಜೂನ್ 10 ರಂದು ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಇಂದು ಘೋಷಣೆ ಮಾಡಿದೆ. ಧರ್ಮ ಮತ್ತು ಚಾರ್ಲಿಯ ಭಾವುಕ ಪಯಣದ ಕತೆಯಿರುವ ಈ ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.
ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ, ಮಲಯಾಳಂ, ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ.