Webdunia - Bharat's app for daily news and videos

Install App

ಮೀಟೂ ಆರೋಪಗಳಿಗೆ ಕಮಿಟಿ ರಚನೆಯಾಗಲಿ ಆದರೆ..::ರಕ್ಷಿತಾ ಪ್ರೇಮ್ ಮಹತ್ವದ ಹೇಳಿಕೆ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (09:41 IST)
Photo Credit: Facebook
ಬೆಂಗಳೂರು: ಮಲಯಾಳಂ ಸಿನಿಮಾ ರಂಗದ ಬಳಿಕ ಈಗ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಬಗ್ಗೆ ತನಿಖೆ ಮಾಡಲು ಸಮಿತಿ ರಚನೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ಇದೀಗ ಈ ಬಗ್ಗೆ ನಿರ್ಮಾಪಕಿ, ನಟಿ ರಕ್ಷಿತಾ ಪ್ರೇಮ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡ ರಕ್ಷಿತಾ ಪ್ರೇಮ್, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ತನಿಖೆ ಮಾಡಲು ಒಂದು ಸಮಿತಿ ರಚನೆಯಾಗಲಿ ಎಂದಿದ್ದಾರೆ. ಆದರೆ ಲೈಂಗಿಕ ದೌರ್ಜನ್ಯ ಎನ್ನುವುದು ಕೇವಲ ಸಿನಿಮಾಗೆ ಸೀಮಿತವಾಗಿಲ್ಲ ಎಂದಿದ್ದಾರೆ.

‘ಹಲವು ಮಹಿಳೆಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಕೆಲವೊಮ್ಮೆ ಇದು ದುರ್ಬಳಕೆಯಾಗುವುದೂ ಇದೆ. ಬಹುಸಂಖ್ಯಾತ ಪುರುಷರ ನಡುವೆ ಕೆಲಸ ಮಾಡುವಾಗ ಮಹಿಳೆಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಾಳೆ. ಸಿನಿಮಾ ರಂಗದಲ್ಲಿ ಮತ್ತು ಹೊರಗೆ ಮಹಿಳೆಯರು ಹಲವು ರೀತಿಯಲ್ಲಿ ದೌರ್ಜನ್ಯಕ್ಕೊಳಗಾಗುತ್ತಿದ್ದಾಳೆ. ಅದು ಬಸ್ ನಲ್ಲಿ ಆಗಿರಬಹುದು, ರೈಲು ಪ್ರಯಾಣದಲ್ಲಿರಬಹುದು, ರಸ್ತೆಯಲ್ಲಿ ನಡೆದಾಡುವಾಗ ಇರಬಹುದು ಅಥವಾ ಸಿನಿಮಾ ಸೆಟ್ ನಲ್ಲಿರಬಹುದು. ಇದರ ಬಗ್ಗೆ ಮುಕ್ತವಾಗಿ ಮಾತನಾಡುವುದರಿಂದ ನೀವು ದುರ್ಬಲರೆನಿಸಿಕೊಳ್ಳುವುದಿಲ್ಲ.

ನನ್ನ ಪ್ರಕಾರ ಇಂತಹ ವಿಚಾರಗಳ ಬಗ್ಗೆ ದೂರು ಕೊಡಲು ಪೊಲೀಸ್ ಠಾಣೆಗಳಿವೆ. ಮಹಿಳೆಯರಿಗೆ ಕಿರುಕುಳ ಕೊಡುವವರ ವಿರುದ್ಧ ತಕ್ಷಣವೇ ಪೊಲೀಸರಿಗೆ ದೂರು ನೀಡಬಹುದು. ಮಾನಸಿಕವಾಗಿ ಅಥವಾ ದೈಹಿಕವಾಗಿ ಯಾವುದೇ ರಂಗದಲ್ಲಿ ಕಿರುಕುಳ ಅನುಭವಿಸಿದ ಮಹಿಳೆ ನ್ಯಾಯ ಪಡೆಯಲು ಅರ್ಹಳು. ಚಿತ್ರರಂಗದ ಮಹಿಳೆಯರ ಸಮಸ್ಯೆ ನಿವಾರಿಸಲು ಒಂದು ಸಮಿತಿ ರಚನೆ ಮಾಡಿದರೆ ಅದಕ್ಕೆ ನನ್ನ ಬೆಂಬಲವಿದೆ’ ಎಂದು ರಕ್ಷಿತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ