Webdunia - Bharat's app for daily news and videos

Install App

ರನ್ಯಾ ರಾವ್‌ ಚಾಲಕನಿಗೆ ಡಿಆರ್‌ಐ ಡ್ರಿಲ್‌: ಅಗೆದಷ್ಟು ಹೊರಬರುತ್ತಿದೆ ಸ್ಫೋಟಕ ಮಾಹಿತಿ

Sampriya
ಶನಿವಾರ, 15 ಮಾರ್ಚ್ 2025 (14:07 IST)
ಬೆಂಗಳೂರು: ನಟಿ ರನ್ಯಾ ರಾವ್‌ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ತನಿಖಾಧಿಕಾರಿಗಳಿಗೆ ಅಗೆದಷ್ಟು ಸ್ಫೋಟಕ ಮಾಹಿತಿ ಹೊರಬರುತ್ತಿದೆ. ಪ್ರಕರಣದ ಜಾಡು ಹಿಡಿದಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಈಗಾಗಲೇ ಡಿಆರ್‌ಐನಿಂದ ಬಂಧನದಲ್ಲಿರುವ ನಟಿ ರನ್ಯಾ ರಾವ್ ಆಪ್ತನನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದು, ಡ್ರಿಲ್‌ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯ ಕಾರು ಚಾಲಕ ದೀಪಕ್‌ ಎಂಬಾತನನ್ನು ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಮಾ.10 ರಂದು ಕೋರ್ಟ್‌ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಇದೇ 24 ರವರೆಗೆ ರನ್ಯಾ ರಾವ್‌ ಪರಪ್ಪನ ಅಗ್ರಹಾರದಲ್ಲೇ ಇರಲಿದ್ದಾಳೆ.

ಈ ಮಧ್ಯೆ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಚಾಲಕ ದೀಪಕ್‌ ಪಾತ್ರದ ಕುರಿತು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಆತನಿಂದ ಹೊರತೆಗೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.

ದುಬೈನಿಂದ ಇದೇ 3 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ವೇಳೆ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದು ಹೇಳಿಕೊಂಡಿದ್ದರು. ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ಪತ್ತೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments