Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ ಈಗ ಮತ್ತೆ ಟ್ರೋಲ್ ಪೇಜ್ ಗಳಿಗೆ ಆಹಾರವಾಗಿದ್ದಾರೆ.
ಅಲ್ಲದೇ, ಅಪ್ಪು ಅಭಿಮಾನಿಗಳು ಕೂಡ ಕರ್ನಾಟಕದಿಂದ ಬೈಕಾಟ್ ರಶ್ಮಿಕಾ ಎಂದು ಹ್ಯಾಷ್ ಟ್ಯಾಗ್ ಹಾಕಿ ವಿರೋಧ ವ್ಯಕ್ತ ಪಡಿಸಿದ್ದಾರೆ.
ಕನ್ನಡದವರೇ ಆದ ರಶ್ಮಿಕಾ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹಾಗಾಗಿ ಸಹಜವಾಗಿಯೇ ಅಪ್ಪು ಇಷ್ಟಪಡುವವರು ರಶ್ಮಿಕಾ ಅವರಿಗೆ ಪ್ರಶ್ನೆ ಮಾಡುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಈ ರೀತಿ ಮಾಡುತ್ತಿರುವುದು ಮೊದಲೇನೂ ಅಲ್ಲ. ಕನ್ನಡ ಸಿನಿಮಾಗಳ ಪ್ರಮೋಷನ್ ಗೆ ಸಿಗಲ್ಲ ಎಂದು ವಿವಾದ ಮಾಡಿಕೊಂಡಿದ್ದರು. ಕನ್ನಡದಲ್ಲಿ ಮಾತನಾಡಿಸಿದರೂ, ಅವರು ಕೊಡುವ ಉತ್ತರ ಇಂಗ್ಲಿಷಿನಲ್ಲಿ ಇರುತ್ತೆ ಎಂದು ಕನ್ನಡ ಪರ ಸಂಘಟನೆಗಳು ಕೂಡ ವಿರೋಧ ವ್ಯಕ್ತ ಪಡಿಸಿದ್ದರು. ಇದೀಗ ಅಪ್ಪು ಅಭಿಮಾನಿಗಳ ಕಣ್ಣಿಗೆ ಬಿದ್ದಿದ್ದಾರೆ ರಶ್ಮಿಕಾ.