Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಟ ದರ್ಶನ್ ರನ್ನು ಹತಾಶೆಗೆ ದೂಡಿದ ಕೋರ್ಟ್ ನಿರ್ಧಾರ

Darshan

Krishnaveni K

ಬೆಂಗಳೂರು , ಗುರುವಾರ, 18 ಜುಲೈ 2024 (15:59 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿತ್ತು. ಆದರೆ ಕೋರ್ಟ್ ನಿರ್ಧಾರ ದರ್ಶನ್ ರನ್ನು ಹತಾಶೆಗೆ ದೂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಆಂಡ್ ಗ್ಯಾಂಗ್ 25 ದಿನಗಳ ನ್ಯಾಯಾಂಗ ಬಂಧನ ಅನುಭವಿಸಿದೆ. ಇಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಈ ವೇಳೆ ನ್ಯಾಯಾಧೀಶರು ಮತ್ತೆ 14 ದಿನಗಳಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದ್ದಾರೆ. ಹೀಗಾಗಿ ಈಗ ಆಗಸ್ಟ್ 1 ರವರೆಗೂ ಮತ್ತೆ ದರ್ಶನ್ ಮತ್ತು ಇತರರು ಜೈಲಿನಲ್ಲೇ ಕಳೆಯಬೇಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಮತ್ತು ತುಮಕೂರು ಜೈಲಿನಲ್ಲಿರುವ ನಾಲ್ವರನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಎದುರು ಹಾಜರುಪಡಿಸಲಾಯಿತು.

ಈ ವೇಳೆ ಎಲ್ಲಾ ಆರೋಪಿಗಳಿಗೆ ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಇದರೊಂದಿಗೆ ಸದ್ಯಕ್ಕಂತೂ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜೈಲೇ ಗತಿಯಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿವೋರ್ಸ್ ಬಗ್ಗೆ ಅಭಿಷೇಕ್ ಬಚ್ಚನ್ ಹೊಸ ಪೋಸ್ಟ್ ವೈರಲ್