Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಿಂಪಲ್ಲಾಗೊಂದು ಲವ್ ಸ್ಟೋರಿ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ನಟಿ, ಆರ್ ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ.
35 ವರ್ಷ ವಯಸ್ಸಿನ ರಚನಾ ಇದ್ದಕ್ಕಿದ್ದಂತೆ ಎದೆನೋವೆಂದು ಹೇಳಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ರೇಡಿಯೋ ಮಿರ್ಚಿ ಆರ್ ಜೆ ಆಗಿದ್ದ ರಚನಾ ಕೆಲವು ಸಮಯದಿಂದ ಆರ್ ಜೆ ಕೆಲಸವನ್ನೂ ಬಿಟ್ಟಿದ್ದರು. ಅವರ ಪೋಷಕರು ಚಾಮರಾಜನಗರದಲ್ಲಿ ರಚನಾ ಜೆಪಿ ನಗರದಲ್ಲಿ ಏಕಾಂಗಿಯಾಗಿ ವಾಸವಿದ್ದರು.
ಇಂದು ಮುಂಜಾನೆ ಹೃದಯಾಘಾತವಾಗಿದ್ದ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಕಾಲಿಕ ನಿಧನ ಎಲ್ಲರನ್ನೂ ಆಘಾತಕ್ಕೀಡು ಮಾಡಿದೆ.