Publish Date: Mon, 25 May 2020 (09:35 IST)
Updated Date: Mon, 25 May 2020 (09:37 IST)
ಬೆಂಗಳೂರು: ಲಾಕ್ ಡೌನ್ ಇಲ್ಲದೇ ಹೋಗಿದ್ದರೆ ಈ ವೇಳೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ದರ್ಶನ್ ಅಭಿಮಾನಿಗಳ ನಿರೀಕ್ಷೆಗೆ ತಣ್ಣೀರೆರಚಿದೆ.
ಇದೀಗ ರಾಬರ್ಟ್ ಬಗ್ಗೆ ಹೊಸ ಸುದ್ದಿಯೊಂದು ಬರಲಿದೆ. ಇಂದು ರಾಬರ್ಟ್ ಸಿನಿಮಾದ ರಿಲೀಸ್ ಡೇಟ್ ನ್ನು ನಿರ್ದೇಶಕ ತರುಣ್ ಸುಧೀರ್ ಹೊರಹಾಕಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದರ ಬದಲು ಹೊಸ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.
ರಂಜಾನ್ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಮಾಧಾನಿಸಲಿದೆ. ಇದು ರಾಬರ್ಟ್ ಬಗೆಗಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಲಿದೆ.