Select Your Language

Notifications

webdunia
webdunia
webdunia
webdunia

ಮಂಡ್ಯದ ಯೋಧನಿಗೆ ರಾಕಿಂಗ್ ಸ್ಟಾರ್ ಯಶ್ ನಮನ

ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ  ಹುತಾತ್ಮರಾದ ಯೋಧರ ಬಗ್ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಸಂತಾಪ ವ್ಯಕ್ತಪಡಿಸಿದ್ದಾರೆ.


ಉಗ್ರರ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು. ಅವರ ಪೈಕಿ ಮಂಡ್ಯದ ಗುರು ಎಂಬವರೂ ಸೇರಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್, ಹರಿಪ್ರಿಯಾ ಸೇರಿದಂತೆ ಚಿತ್ರರಂಗದ ಅನೇಕ ತಾರೆಯರು ದಾಳಿಯಲ್ಲಿ ಮೃತರಾದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಶ್ ‘ವೀರ ಯೋಧರ ಬಲಿದಾನಕ್ಕೆ ತಕ್ಕ ನ್ಯಾಯ ಸಿಗಬೇಕು ಎಂದು ಆಶಿಸುತ್ತೇನೆ. ದಾಳಿಯಲ್ಲಿ ನಮ್ಮ ಮಂಡ್ಯದ ಯೋಧ ಕೂಡಾ ಬಲಿಯಾಗಿರುವುದು ನೋವಿನ ಸಂಗತಿ. ಎಲ್ಲಾ ಯೋಧರ ಕುಟುಂಬದ ಜತೆ ನಾವಿದ್ದೇವೆ’ ಎಂದು ಯಶ್ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ತಕಧಿಮಿತ ಡ್ಯಾನ್ಸಿಂಗ್ ಸ್ಟಾರ್ ವಿವಾದ: ಅಕುಲ್ ಬಾಲಾಜಿ ವಿರುದ್ಧ ದೂರು ದಾಖಲಿಸಲು ಮುಂದಾದ ಆದಂ ಪಾಶಾ