Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿರುವ ಹಿನ್ನಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಟೆಂಪಲ್ ರನ್ ನಡೆಸಿದ್ದಾರೆ.
ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್, ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ಯಶ್ ಮಿಂಚುತ್ತಿದ್ದರು.
ಇನ್ನು, ತಮ್ಮ ನೆಚ್ಚಿನ ನಟನನ್ನು ಕಾಣಲು ಅಭಿಮಾನಿಗಳ ದಂಡೇ ನೆರೆದಿತ್ತು. ಎಲ್ಲರತ್ತ ಕೈ ಬೀಸಿ ಯಶ್ ಕಾರಿನಲ್ಲಿ ತೆರಳಿದರು.