ಹೈದರಾಬಾದ್ : ಥಿಯಾ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಸಾಯಿ ಪಲ್ಲವಿ ಪ್ರೇಮ ಚಿತ್ರದ ಮೂಲಕ ಯುವಕರ ಕನಸಿನ ನಾಯಕಿಯಾಗಿದ್ದಾರೆ. ಬಳಿಕ ಅವರು ಹಲವು ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ. ಅಂತಹ ನಟಿ ಇದೀಗ ಈ ಚಿತ್ರದಲ್ಲಿ ನಟಿಸುತ್ತಿರುವ ಪಾತ್ರದ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.
ನಟಿ ಸಾಯಿ ಪಲ್ಲವಿ ‘ಲವ್ ಸ್ಟೋರಿ’ ಮತ್ತು ‘ವಿರಾಟ ಪರ್ವಂ’ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಈ ನಡುವೆ ಇದೀಗ ನಟಿ ಸಾಯಿ ಪಲ್ಲವಿ ಸ್ಟಾರ್ ನಟನ ಚಿತ್ರದಲ್ಲಿ ತಂಗಿಯ ಪಾತ್ರ ಮಾಡಲು ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಹೌದು. ನಟಿ ಸಾಯಿ ಪಲ್ಲವಿ ಅವರು ತಮಿಳು ‘ವೇದಲಂ’ ಚಿತ್ರದ ತೆಲುಗು ರಿಮೇಕ್ ನಲ್ಲಿ ಚಿರಂಜೀವಿ ಅವರ ತಂಗಿ ಪಾತ್ರದಲ್ಲಿ ನಟಿಸಲಿದ್ದಾರಂತೆ. ಅಂದರೆ ತಮಿಳಿನಲ್ಲಿ ಲಕ್ಷ್ಮೀ ಮೆನನ್ ನಿರ್ವಹಿಸಿದ ಪಾತ್ರವನ್ನು ತೆಲುಗಿನಲ್ಲಿ ಸಾಯಿ ಪಲ್ಲವಿ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ನಟಿಯ ಈ ನಿರ್ಧಾರ ಅಭಿಮಾನಿಗಳಲ್ಲಿ ಆಶ್ಚರ್ಯವನ್ನುಂಟು ಮಾಡಿದ್ದು, ಇವರು ಬೇಡಿಕೆ ಕಳೆದುಕೊಂಡರೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.