ಬೆಂಗಳೂರು: ಕೊರೋನಾ ಪರಿಹಾರ ಕಾರ್ಯಕ್ಕೆ ಸರ್ಕಾರಕ್ಕೆ ನೆರವಾಗಲು ಈಗಾಗಲೇ ತೆಲುಗು ಸ್ಟಾರ್ ನಟರು ಲಕ್ಷ ಲಕ್ಷ ಹಣವನ್ನು ತಮ್ಮ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿ ಸುದ್ದಿಯಾಗಿದ್ದಾರೆ.
ಹಲವು ಕ್ರೀಡಾಳುಗಳೂ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ, ತಮ್ಮ ರಾಜ್ಯ ಸರ್ಕಾರಗಳಿಗೆ ತಮ್ಮ ಕೈಲಾದಷ್ಟು ಧನ ಸಹಾಯ ಮಾಡಿದ್ದಾರೆ. ಆದರೆ ಸ್ಯಾಂಡಲ್ ವುಡ್ ನಟರು ಈಗ ಒಬ್ಬೊಬ್ಬರಾಗಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
ಸ್ಯಾಂಡಲ್ ವುಡ್ ನಟ ದರ್ಶನ್, ಕಿಚ್ಚ ಸುದೀಪ್ ತಮ್ಮ ಅಭಿಮಾನಿ ಬಳಗದವರ ಮೂಲಕ ಬಡವರಿಗೆ ಅನ್ನದಾನ ಮಾಡಿದ್ದರು. ಇನ್ನು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಲನಚಿತ್ರ ಕಾರ್ಮಿಕರಿಗೆ ನೆರವಾಗಲು ನಿರ್ಧರಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ಕೊಡುಗೆ ನೀಡಲಿದ್ದಾರೆ. ಇನ್ನಷ್ಟು ನಟರು ಮುಂದಿನ ದಿನಗಳಲ್ಲಿ ತಮ್ಮದೇ ರೀತಿಯಲ್ಲಿ ನೆರವಾಗುವ ಸಾಧ್ಯತೆಯಿದೆ.