ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾ ಬಗೆದಷ್ಟೂ ತೆರೆದುಕೊಳ್ಳುತ್ತಿದೆ.
ಈ ನಡುವೆ ನಟ, ನಟಿಯರು ಹಾಗೂ ರಾಜಕಾರಣಿಗಳ ಮಕ್ಕಳಿಗಾಗಿ, ಉದ್ಯಮಿಗಳಿಗಾಗಿ ಬೃಹತ್ ಪಾರ್ಟಿ ಆಯೋಜನೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ ವೀರೇನ್ ಖನ್ನಾನನ್ನು ದೆಹಲಿಯಿಂದ ಬೆಂಗಳೂರಿಗೆ ತನಿಖೆಗಾಗಿ ಕರೆ ತರಲಾಗಿದೆ.
ಡ್ರಗ್ ಪೆಡ್ಲರ್ ವೀರೇನ್ ಖನ್ನಾ ದೆಹಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದನು.
ಇತನನ್ನು ಬೆಂಗಳೂರಿನ ಚಾಮರಾಜನಗರದಲ್ಲಿರುವ ಸಿಸಿಬಿ ಕಚೇರಿಗೆ ತಂದು ವಿಚಾರಣೆ ನಡೆಸಲಾಗುತ್ತಿದೆ.
ಪಾರ್ಟಿಗಳ ಆಯೋಜನೆ ಜೊತೆಗೆ ಡ್ರಗ್ಸ್ ಸಪ್ಲೈ ಮಾಡುತ್ತಿರುವ ಆರೋಪವೂ ಈತನ ಮೇಲಿದೆ.