Webdunia - Bharat's app for daily news and videos

Install App

ದರ್ಶನ್‌ ಬಂಧಿಸಿದ ಪೊಲೀಸ್‌ ಕರ್ತವ್ಯಕ್ಕೆ ಸ್ಯಾಂಡಲ್‌ವುಡ್‌ ಕ್ವೀನ್‌ ಮೆಚ್ಚುಗೆ

sampriya
ಶುಕ್ರವಾರ, 14 ಜೂನ್ 2024 (17:09 IST)
Photo By X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ನಟ ದರ್ಶನ್‌ ಅವರ ಕೌರ್ಯಕ್ಕೆ ಚಿತ್ರರಂಗದವರು ಹಾಗೂ ಜನಸಾಮಾನ್ಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೂ ಇಷ್ಟು ದೊಡ್ಡ ಹೆಸರುಗಳಿಸಿರುವ ನಟರೊಬ್ಬರು ಇಂತಹ ಕೃತ್ಯ ಎಸಗಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರು ಇನ್ಸ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸುದೀರ್ಘ ಪೋಸ್ಟ್‌ ಹಾಕಿರುವ ರಮ್ಯಾ, 'ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು' ಎಂದಿದ್ದಾರೆ.

ಅದೇ ಪೋಸ್ಟ್‌ನಲ್ಲಿ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. 'ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ' ಎಂದಿದ್ದಾರೆ.

#JusticeforRenukaswamy #Darshan #Yedyurappa #PrajwalRevanna' ಎಂದು ನಟಿ ಪೋಸ್ಟ್ ಅನ್ನು ಕೊನೆಗೊಳಿ, ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಬಂಧನ ವಾರಂಟ್‌ ಹೊರಡಿಸಿರುವ ಬಗ್ಗೆಯೂ ಪೋಸ್ಟ್‌ ಹಂಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ