ಬೆಂಗಳೂರು : ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಚಿತ್ರರಂಗದ ಬಗ್ಗೆ ಮಾತನಾಡುವುದು ನೋವಿನ ಸಂಗತಿ ಎಂದು ಫಿಲ್ಮ ಚೇಂಬರ್ ಅಧ್ಯಕ್ಷ ಜಯರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
ಫಿಲ್ಮ ಚೇಂಬರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಕೆಲವರ ಮೇಲೆ ಆರೋಪ ಮಾಡುತ್ತಿದ್ದಾರೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಆದರೆ ಇಂತಹ ಆರೋಪ ನೋವಿನ ಸಂಗತಿಯಾಗಿದೆ. ನಮ್ಮ ಸದಸ್ಯರು ಯಾರಾದರೂ ನೋವಾಗಿದೆ ಎಂದು ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.