ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆಯುತ್ತಿರುವ ಪುತ್ರಿ ಸಂಜನಾ ಗಲ್ರಾನಿ ಭೇಟಿಗೆ ಬಂದ ಪೋಷಕರನ್ನು ಜೈಲು ಸಿಬ್ಬಂದಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿದ್ದರೂ ರಾಗಿಣಿ, ಸಂಜನಾಗೆ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಹೀಗಾಗಿ ತಮಗೆ ಬೇಕಾದ ವಸ್ತುಗಳನ್ನು ಪೋಷಕರಿಂದ ತರಿಸಿಕೊಳ್ಳುತ್ತಿದ್ದರು. ಇದಕ್ಕೆ ಜೈಲು ಅಧಿಕಾರಿಗಳು ಕತ್ತರಿ ಹಾಕಿದ್ದಾರೆ. ಮೊನ್ನೆಯಷ್ಟೇ ಸಂಜನಾ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಜೈಲಿಗೆ ಭೇಟಿ ನೀಡಿದ್ದ ಪೋಷಕರು ಹೊಸ ಬಟ್ಟೆ ನೀಡಿದ್ದರು. ಆದರೆ ಈಗ ಮತ್ತೆ ಪೋಷಕರ ಭೇಟಿಗೆ ನಿರಾಕರಿಸಲಾಗಿದೆ.