Publish Date: Fri, 28 Jun 2019 (10:46 IST)
Updated Date: Fri, 28 Jun 2019 (10:50 IST)
ಬೆಂಗಳೂರು: ಶಿವರಾಜ್ ಕುಮಾರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ ರುಸ್ತುಂ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಇಷ್ಟು ದಿನ ಸಾಹಸ ನಿರ್ದೇಶಕರಾಗಿದ್ದ ರವಿವರ್ಮಾ ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ. ಬೆಳಿಗ್ಗೆಯಿಂದಲೇ ಚಿತ್ರಮಂದಿರಗಳು ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ನಡುವೆ ಚಿತ್ರತಂಡದ ಪ್ರಚಾರ ಕಡಿಮೆಯಾಗಿದೆ ಎಂದು ಕೆಲವು ಅಭಿಮಾನಿಗಳು ಆಕ್ಷೇಪವ್ಯಕ್ತಪಡಿಸಿದ್ದಾರೆ.
ಶಿವರಾಜ್ ಕುಮಾರ್ ಜತೆಗೆ ಬಾಲಿವುಡ್ ತಾರೆ ವಿವೇಕ್ ಓಬೇರಾಯ್, ರಚಿತಾ ರಾಮ್, ಮಯೂರಿ ಕ್ಯಾತರಿ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ರುಸ್ತುಂ ಬಿಡುಗಡೆ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್, ಅನೂಪ್ ಭಂಡಾರಿ ಸೇರಿದಂತೆ ಹಲವರು ಶುಭ ಕೋರಿದ್ದಾರೆ.