Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 25 ವರ್ಷಗಳ ಬಳಿಕ ಉತ್ತರ ಕನ್ನಡ ಜಿಲ್ಲೆಯ ಸಹಸ್ರಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ದೇವಾಲಯಕ್ಕೆ ಭೇಟಿ ನೀಡಿದ್ದ ಶಿವರಾಜ್ ಕುಮಾರ್ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ಇದಕ್ಕೂ ಮೊದಲು 25 ವರ್ಷಗಳ ಹಿಂದೆ ನಮ್ಮೂರ ಮಂದಾರ ಹೂವೆ ಸಿನಿಮಾದ ಓ ಒಲವೆ ನಿನಗೆ ಹಾಡಿನ ಚಿತ್ರೀಕರಣಕ್ಕಾಗಿ ಇಲ್ಲಿಗೆ ಶಿವಣ್ಣ ಬಂದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿಗೆ ಬರುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.