Publish Date: Fri, 29 Oct 2021 (09:09 IST)
Updated Date: Fri, 29 Oct 2021 (09:09 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕರಾಗಿರುವ ಭಜರಂಗಿ 2 ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಎ ಹರ್ಷ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ ವಿಶೇಷ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲವಿತ್ತು.
ಥಿಯೇಟರ್ ಸಂಪೂರ್ಣ ತೆರೆಯಲು ಅನುಮತಿ ಸಿಕ್ಕ ಮೇಲೆ ಬಿಡುಗಡೆಯಾಗಿರುವ ಮತ್ತೊಂದು ಸ್ಟಾರ್ ಸಿನಿಮಾ ಇದಾಗಿದೆ. ಹೀಗಾಗಿ ಅಭಿಮಾನಿಗಳಲ್ಲಿ ಭಾರೀ ಉತ್ಸಾಹವಿದೆ. ಬೆಳ್ಳಂ ಬೆಳಿಗ್ಗೆಯೇ ತಮ್ಮ ನೆಚ್ಚಿನ ನಟನ ಸಿನಿಮಾವನ್ನು ಪಟಾಕಿ ಸಿಡಿಸಿ, ಜೈಕಾರ ಕೂಗು ಬರಮಾಡಿಕೊಂಡಿದ್ದಾರೆ.