ಉಡುಪಿ ತಾಲೂಕಿನ ಕೋಟ ಗ್ರಾಮದ ಶಿವರಾಮ್ ಕಾರಂತ ಥೀಮ್ ಪಾರ್ಕ್‌ನಲ್ಲಿ ಖ್ಯಾತ ನಟ ಪ್ರಕಾಶ್ ರೈಗೆ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ನೀಡಿ ಗೌರವಸಲಾಯಿತು.
ನಟ ಪ್ರಕಾಶ್ ರೈ ಸಿನೆಮಾ ಕ್ಷೇತ್ರದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕೋಟತಟ್ಟು ಗ್ರಾಮ ಪಂಚಾಯಿತಿ ಅವರ ಹೆಸರನ್ನು ಆಯ್ಕೆ ಮಾಡಿತ್ತು.
ಕೋಟತಟ್ಟು ಗ್ರಾಮ ಪಂಚಾಯಿತಿ ಇಂದು ಪ್ರಕಾಶ್‌ರೈಗೆ ಶಿವರಾಮ ಕಾರಂತ ಪ್ರಶಸ್ತಿ ನೀಡಿ ಗೌರವಿಸಿತು.
ಮತ್ತೊಂದೆಡೆ ಪ್ರಕಾಶ್ ರೈಗೆ ಪ್ರಶಸ್ತಿ ನೀಡುವುದನ್ನು ವಿರೋಧಿಸಿ ಕಪ್ಪು ಬಾವುಟ, ಫ್ಲೆಕ್ಸ್‌ಗಳನ್ನು ಹಿಡಿದು ಥೀಮ್ ಪಾರ್ಕ್‌ನತ್ತ ಹೊರಟಿದ್ದ ಪ್ರತಿಭಟನೆಕಾರರನ್ನು ಕೋಟ ಬಸ್ ನಿಲ್ದಾಣ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರಕಾಶ್ ರೈ ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರನ್ನು ಟೀಕಿಸಿದ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಪ್ರಕಾಶ್‌ರೈಗೆ ಪ್ರಶಸ್ತಿ ನೀಡಬಾರದು ಎಂದು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.