Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ನಿನ್ನೆ ನಮ್ಮನ್ನಗಲಿದ ಹಿರಿಯ ನಟ ಶಿವರಾಂ ಪಾರ್ಥಿವ ಶರೀರವನ್ನು ಇಂದು ಸಾರ್ವಜನಿಕ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರಕ್ಕೆ ಕರೆತರಲಾಗಿದೆ.
ಇಂದು ಬೆಳಿಗ್ಗೆ 7.30 ರ ಸುಮಾರಿಗೆ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರ ಕರೆದೊಯ್ಯಲಾಯಿತು. 10 ಗಂಟೆಯವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಅದಾದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ನಿನ್ನೆಯಿಂದ ಅನೇಕ ಸ್ಯಾಂಡಲ್ ವುಡ್ ಕಲಾವಿದರು, ರಾಜಕೀಯ ನಾಯಕರು, ಗಣ್ಯರು ಬಂದು ಶಿವರಾಂ ಅಂತಿಮ ದರ್ಶನ ಪಡೆದಿದ್ದಾರೆ.