Publish Date: Sat, 19 May 2018 (07:53 IST)
Updated Date: Sat, 19 May 2018 (07:56 IST)
ಬೆಂಗಳೂರು : ಬಾರ್ ನೌಕರನ ಅಪಹರಣ, ಪ್ರಾಣ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರಿರುವ ಸುನಾಮಿ ಕಿಟ್ಟಿ ಅವರಿಗೆ ಇದೀಗ ಕೋರ್ಟ್ ಜಾಮೀನು ನೀಡಿದೆ.
ಸುನಾಮಿ ಕಿಟ್ಟಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದ್ದು, 1 ಲಕ್ಷ ಮೊತ್ತದ ಬಾಂಡ್, ಒಬ್ಬರ ಭದ್ರತೆ ನೀಡಬೇಕು, ಸಾಕ್ಷ್ಯ ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ