ಬೆಂಗಳೂರು: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ ಲಾಲ್ ಮತ್ತೆ ಕನ್ನಡಕ್ಕೆ ಬರಲಿದ್ದಾರೆ. ಈ ಬಾರಿ ಅವರು ರಿಯಲ್ ಸ್ಟಾರ್ ಉಪೇಂದ್ರ ಜತೆ ತೆರೆ ಹಂಚಿಕೊಳ್ಳಲಿದ್ದಾರೆ.
ಉಪೇಂದ್ರ ಕನ್ನೇಶ್ವರ ಎಂಬ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ಚಿತ್ರವನ್ನು ಸಂಗೊಳ್ಳಿ ರಾಯಣ್ಣ ಸಿನಿಮಾ ಖ್ಯಾತಿಯ ನಾಗಣ್ಣ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ಪ್ರಾರಂಭವಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಮೋಹನ್ ಲಾಲ್ ಬರಲಿದ್ದಾರೆ.
ಈ ಹಿಂದೆ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾರೆ ಎಂಬ ಸುದ್ದಿ ಇತ್ತು. ಆದರೆ ಇದೀಗ ಮೋಹನ್ ಲಾಲ್ ಅವರನ್ನು ಕನ್ನಡಕ್ಕೆ ಮತ್ತೊಮ್ಮೆ ಕರೆತರಲಾಗುತ್ತಿದೆ. ಚಿತ್ರ ತಮಿಳು ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಲಿದೆ.
ಮೋಹನ್ ಲಾಲ್ ಈಗಾಗಲೇ ಕನ್ನಡದಲ್ಲಿ ಎರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರಾಜೇಂದ್ರ ಸಿಂಗ್ ಬಾಬು ಪುತ್ರ ಆದಿತ್ಯ ಮತ್ತು ರಕ್ಷಿತಾ ಅಭಿನಯದ ಲವ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅದರ ನಂತರ ಪುನೀತ್ ರಾಜ್ ಕುಮಾರ್ ಜತೆ ಮೈತ್ರಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಕನ್ನೇಶ್ವರ ಅವರ ಮೂರನೇ ಕನ್ನಡ ಚಿತ್ರವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ