Webdunia - Bharat's app for daily news and videos

Install App

Sushant Singh Rajput Case: ಮಾಧ್ಯಮಗಳು ರಿಯಾ ಚಕ್ರವರ್ತಿ ಬಳಿ ಕ್ಷಮೆ ಕೇಳಬೇಕು

Sampriya
ಸೋಮವಾರ, 24 ಮಾರ್ಚ್ 2025 (15:20 IST)
Photo Courtesy X
ಬೆಂಗಳೂರು: ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಆತನ ಆಗಿನ ಗೆಳತಿ ರಿಯಾ ಚಕ್ರವರ್ತಿ ಬಳಿ ಮಾಧ್ಯಮಗಳು ಕ್ಷಮೆಯಾಚಿಸಬೇಕೆಂದು ಬಾಲಿವುಡ್ ನಟಿ ದಿಯಾ ಮಿರ್ಜಾ ಆಗ್ರಹಿಸಿದ್ದಾರೆ.

ಸುಶಾಂತ್ ಸಿಂಗ್‌ ರಜಪೂತ್ ಸಾವು ಪ್ರಕರಣದಲ್ಲಿ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ತೀವ್ರ ನೋವು ಮತ್ತು ಕಿರುಕುಳ ನೀಡಿದೆ ಎಂದು ದಿಯಾ ಮಿರ್ಜಾ ಅವರು ಬರೆದುಕೊಂಡಿದ್ದಾರೆ. ‌ ಸುಶಾಂತ್ ಸಾವು ಪ್ರಕರಣದಲ್ಲಿ ರಿಯಾ ಕೈವಾಡವಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ‌ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂರ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ.  

ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಆರೋಪಿಸಿ ನಟನ ತಂದೆ ಕೆಕೆ ಸಿಂಗ್‌ ನೀಡಿದ ದೂರು ಮತ್ತು ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಹೋದರಿಯರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಬಿಐ ಶನಿವಾರ ಈ ವರದಿ ಸಲ್ಲಿಸಿದೆ.

ಆಗಸ್ಟ್ 2020 ರಲ್ಲಿ ಬಿಹಾರ ಪೊಲೀಸರಿಂದ ಸಿಬಿಐ ಈ ಪ್ರಕರಣವನ್ನು ವಹಿಸಿಕೊಂಡಿತ್ತು. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ತನಿಖೆ ನಡೆಸಿದ ನಂತರ, ಸುಶಾಂತ್ ರಜಪೂತ್ ಅವರನ್ನು ಆತ್ಮಹತ್ಯೆಗೆ ತಳ್ಳಿದವರ ಬಗ್ಗೆ ಯಾವುದೇ ಪುರಾವೆಗಳು ಸಂಸ್ಥೆಗೆ ಸಿಗಲಿಲ್ಲ ಮತ್ತು ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಿಯಾ ಚಕ್ರವರ್ತಿ, ಅವರ ಪೋಷಕರು ಮತ್ತು ಸಹೋದರ ಸೇರಿದಂತೆ ಪ್ರಕರಣದಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್‌ಗಳಲ್ಲಿ ಹೆಸರಿಸಲಾದ ಎಲ್ಲರನ್ನೂ ಸಿಬಿಐ ಖುಲಾಸೆಗೊಳಿಸಿದೆ ಎಂದು ಅವರು ಹೇಳಿದರು.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವಿಧಿವಿಜ್ಞಾನ ತಂಡವು ಸುಶಾಂತ್ ರಜಪೂತ್ ಅವರನ್ನು ಕೊಲೆ ಮಾಡಿಲ್ಲ ಮತ್ತು ಇದು ಆತ್ಮಹತ್ಯೆಯಿಂದ ಸಂಭವಿಸಿದ ಸಾವು ಎಂದು ಹೇಳಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments