Webdunia - Bharat's app for daily news and videos

Install App

ನನ್ನನ್ನು ದೇವಸ್ಥಾನದಲ್ಲಿ ಬಾಗಿಲಲ್ಲಿ ನಿಲ್ಲಿಸಿ ಜಾತಿ ಕೇಳಿದ್ರು: ನಟಿ ನಮಿತಾ ಗಂಭೀರ ಆರೋಪ

Krishnaveni K
ಮಂಗಳವಾರ, 27 ಆಗಸ್ಟ್ 2024 (10:03 IST)
Photo Credit: Facebook
ಚೆನ್ನೈ: ನನ್ನನ್ನು ದೇವಸ್ಥಾನದ ಬಾಗಿಲಲ್ಲಿ ನಿಂತು ಜಾತಿ ಕೇಳಿದ್ರು ಎಂದು ಮಾದಕ ನಟಿ ನಮಿತಾ ಮಾಧ್ಯಮಗಳ ಮುಂದೆ ಗಂಭೀರ ಆರೋಪ ಮಾಡಿದ್ದಾರೆ. ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಹೋದಾಗ ಈ ಘಟನೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪತಿ ವೀರೇಂದ್ರ ಜೊತೆ ನಮಿತಾ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ವೇಳೆ ಬಾಗಿಲಲ್ಲೇ ತಡೆದು ನೀವು ಹಿಂದೂ ಎಂದು ಸಾಬೀತುಪಡಿಸಿ, ಜಾತಿ ಪ್ರಮಾಣ ಪತ್ರ ನೀಡಿ ಎಂದು ಕೇಳಿದರು ಎಂದು ನಮಿತಾ ಆರೋಪ ಮಾಡಿದ್ದಾರೆ. ಕೃಷ್ಣ ಜನ್ಮಾಷ್ಠಮಿ ನಿಮಿತ್ತ ದೇವಾಲಯಕ್ಕೆ ತೆರಳಿದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ದೇವಸ್ಥಾನಕ್ಕೆ ತೆರಳುವ ಒಂದು ದಿನ ಮುಂಚಿತವಾಗಿಯೇ ತಿಳಿಸಲಾಗಿದೆ. ಜನ ಸೇರಿ ಬೇರೆಯವರಿಗೆ ತೊಂದರೆಯಾಗುವುದು ಬೇಡ ಎಂಬ ಕಾರಣಕ್ಕೆ ಮೊದಲೇ ತಿಳಿಸಿದ್ದೆವು. ಆ ದಿನ ನಾವು ಮಾಸ್ಕ್ ಹಾಕಿಕೊಂಡು ಜನ ಗುರುತಿಸುವುದು ಬೇಡ ಎಂದು ದೇವಸ್ಥಾನಕ್ಕೆ ಬಂದೆವು. ಆದರೆ ಬಾಗಿಲಲ್ಲೇ ಜಾತಿ ಪ್ರಮಾಣ ಪತ್ರ ನೀಡಿ ಎಂದು 20 ನಿಮಿಷ ಕಾಯಿಸಲಾಯಿತು.

ಇದುವರೆಗೆ ದೇಶದ ಯಾವುದೇ ದೇವಸ್ಥಾನದಲ್ಲಿ ನಮಗೆ ಈ ಅನುಭವವಾಗಿರಲಿಲ್ಲ. ನಾನು ಹಿಂದೂ ಕುಟುಂಬದಲ್ಲಿ ಹುಟ್ಟಿದವಳು. ನಮ್ಮ ಮದುವೆ ನಡೆದಿದ್ದು ತಿರುಪತಿಯಲ್ಲಿ. ಮಕ್ಕಳಿಗೆ ಕೃಷ್ಣನ ಹೆಸರಿಟ್ಟಿದ್ದೇವೆ. ಇದೆಲ್ಲಾ ಗೊತ್ತಿದ್ದೂ ದೇವಸ್ಥಾನದ ಸಿಬ್ಬಂದಿ ನಮ್ಮ ಜೊತೆ ಒರಟಾಗಿ ವರ್ತಿಸಿದ್ದಾರೆ ಎಂದು ನಮಿತಾ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ