ಹೈದರಾಬಾದ್ : ಟಾಲಿವುಡ್ ನಟಿ ನಿಕ್ಕಿ ಗಲ್ರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
ಇಡೀ ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಸಿನಿಮಾ ರಂಗದ ಹಲವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೀಗ ನಟಿ ನಿಕ್ಕಿ ಗಲ್ರಾನಿ ಅವರಿಗೆ ಕೊರೊನಾ ಸೋಂಕು ತಗುಲಿದೆಯಂತೆ. ಈ ಬಗ್ಗೆ ನಟಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕಳೆದ ವಾರ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ಹಾಗೇ ಹೊರಗಡೆ ಹೋದಾಗ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ನಟಿ ಮನವಿ ಮಾಡಿದ್ದಾರೆ.