Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡಿದ್ರೆ ಬಂದ್ ಮಾಡಿಸ್ತೇವೆ: ವಾಟಾಳ್ ನಾಗರಾಜ್ ವಾರ್ನ್

Krishnaveni K
ಮಂಗಳವಾರ, 18 ಮಾರ್ಚ್ 2025 (14:07 IST)
ಬೆಂಗಳೂರು: ಕನ್ನಡ  ನಟ ರಿಷಬ್ ಶೆಟ್ಟಿ ಬಾಲಿವುಡ್ ನಲ್ಲಿ ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೊರಟಿದ್ದಾರೆ. ಆದರೆ ಈ ಸಿನಿಮಾ ಮಾಡಿದರೆ ಜೋಕೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಮರಾಠಿಗರ ದಬ್ಬಾಳಿಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್ ಗೆ ಕೆಲವು ಸಂಘಟನೆಗಳು ಬೆಂಬಲ ನೀಡುತ್ತಿಲ್ಲ.

ಈ ಬಗ್ಗೆ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿವೆ. ಬಂದ್ ಯಶಸ್ವಿಗೊಳಿಸಲು ಎಲ್ಲರೂ ಕೈ ಜೋಡಿಸುವಂತೆ ಕನ್ನಡ ಪರ ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ‘ಕನ್ನಡ ಚಿತ್ರನಟರು ಛತ್ರಪತಿ ಶಿವಾಜಿ ಸಿನಿಮಾ ಮಾಡಿದರೆ ಬಹಿಷ್ಕರಿಸುತ್ತೇವೆ, ಕನ್ನಡಿಗರ ಮೇಲಿನ ದೌರ್ಜನ್ಯವನ್ನು ಸಹಿಸಿಕೊಂಡಿರಬೇಕಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ರಿಷಬ್ ಶೆಟ್ಟಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments