Publish Date: Mon, 05 Dec 2022 (16:35 IST)
Updated Date: Mon, 05 Dec 2022 (16:37 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ ಗೆ ತೀವ್ರ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ಇದೀಗ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಕಲಾವಿದನಾಗಿ, ಹಾಸ್ಯ ನಟನಾಗಿ ಅನೇಕ ಪಾತ್ರಗಳನ್ನು ಮಾಡಿ ಜನರನ್ನು ರಂಜಿಸಿದ್ದಾರೆ. ಅವರು ಬೇಗ ಗುಣಮುಖರಾಗಲೆಂದು ಹಾರೈಸೋಣ.