Webdunia - Bharat's app for daily news and videos

Install App

ವಿಜಯ್ ದೇವರಕೊಂಡ ನನ್ನ ದೊಡ್ಡ ಶಕ್ತಿ: ರಶ್ಮಿಕಾ ಮಂದಣ್ಣ

Krishnaveni K
ಗುರುವಾರ, 1 ಫೆಬ್ರವರಿ 2024 (08:40 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಮತ್ತು  ವಿಜಯ್ ದೇವರಕೊಂಡ ಪರಸ್ಪರ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದ ಹರಿದಾಡುತ್ತಲೇ ಇದೆ.

ಆದರೆ ಇಬ್ಬರೂ ಇದನ್ನು ಎಲ್ಲೂ ಕನ್ ಫರ್ಮ್ ಮಾಡಿಲ್ಲ. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಶ್ಮಿಕಾ ತಮಗೆ ಜೀವನದಲ್ಲಿ ಎಲ್ಲರಿಗಿಂತ ಹೆಚ್ಚು ಬೆಂಬಲವಾಗಿ ನಿಂತಿದ್ದು ವಿಜಯ್ ದೇವರಕೊಂಡ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ತಮ್ಮ ಮತ್ತು ವಿಜಯ್ ನಡುವಿನ ಆಪ್ತತೆ ಬಗ್ಗೆ ಸುಳಿವು ನೀಡಿದ್ದಾರೆ.

ವಿಜಯ್ ಬಗ್ಗೆ ರಶ್ಮಿಕಾ ಹೇಳಿದ್ದೇನು?
‘ವಿಜು ಮತ್ತು ನಾನು ಒಟ್ಟಿಗೇ ವೃತ್ತಿ ಜೀವನದಲ್ಲಿ ಬೆಳವಣಿಗೆ ಹೊಂದಿದವರು. ನಾನು ಈಗ ಜೀವನದಲ್ಲಿ ಏನೇ ಮಾಡಿದರೂ ಅದರಲ್ಲಿ ಆತನ ಪಾಲೂ ಇದೆ. ನಾನು ಏನೇ ಮಾಡುವುದಿದ್ದರೂ ವಿಜಯ್ ಸಲಹೆ ಕೇಳುತ್ತೇನೆ. ಆತ ಎಲ್ಲದಕ್ಕೂ ‘ಎಸ್’ ಎಂದು ತಲೆಯಾಡಿಸುವ ವ್ಯಕ್ತಿಯಲ್ಲ. ಯಾವುದು ಒಳ್ಳೆಯದು ಯಾವುದು ಒಳ್ಳೆಯದಲ್ಲ ಎಂದು ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿ. ವೈಯಕ್ತಿಕವಾಗಿ ಆತ  ನನಗೆ ತುಂಬಾ ಸಪೋರ್ಟ್ ಮಾಡಿದ್ದಾನೆ. ಜೀವನದಲ್ಲಿ ಯಾರಿಂದಲೂ ನನಗೆ ಅಷ್ಟೊಂದು ಸಪೋರ್ಟ್ ಸಿಕ್ಕಿಲ್ಲ. ಹೀಗಾಗಿ ನಾನು ಯಾವತ್ತೂ ಗೌರವಿಸುವ ವ್ಯಕ್ತಿ’ ಎಂದು ವಿಜಯ್ ಗುಣಗಾನ ಮಾಡಿದ್ದಾರೆ.

2018 ರಲ್ಲಿ ಇಬ್ಬರೂ ಗೀತ ಗೋವಿಂದಂ ಸಿನಿಮಾ ಮಾಡುವಾಗ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಅದಾದ ಬಳಿಕ ಎಲ್ಲೂ ಇಬ್ಬರೂ ತಮ್ಮ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟಿಲ್ಲ.  ಆದರೆ ಇಬ್ಬರ ವರ್ತನೆ ಪ್ರೀತಿಯನ್ನು ಸಾರಿ ಹೇಳುತ್ತದೆ. ಇತ್ತೀಚೆಗೆ ಇಬ್ಬರೂ ಇದೇ ತಿಂಗಳು ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿತ್ತು. ಆದರೆ ವಿಜಯ್ ಇದನ್ನು ಅಲ್ಲಗಳೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments