ಹೈದರಾಬಾದ್: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಈ ವರ್ಷಾಂತ್ಯಕ್ಕೆ ವಿವಾಹವಾಗಲಿದ್ದಾರೆ ಎಂಬ ವದಂತಿಗಳಿಗೆ ನಟ ವಿಜಯ್ ದೇವರಕೊಂಡ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ.
ತೆರೆ ಮೇಲಿನ ಈ ಹಿಟ್ ಜೋಡಿ ಈ ವರ್ಷಾಂತ್ಯಕ್ಕೆ ವಿವಾಹವಾಗಲಿದ್ದಾರೆ ಎಂಬ ಸುದ್ದಿ ನಿನ್ನೆಯಿಡೀ ಭಾರೀ ವೈರಲ್ ಆಗಿತ್ತು. ಇದಕ್ಕೀಗ ವಿಜಯ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಎಂದಿನಂತೆ ಇದೊಂದು ಶುದ್ಧ ಅಸಂಬದ್ಧ, ಸುಳ್ಳು ಸುದ್ದಿ ಎಂದು ವಿಜಯ್ ದೇವರಕೊಂಡ ಟ್ವೀಟ್ ಮಾಡಿದ್ದಾರೆ. ಆ ಮೂಲಕ ತಮ್ಮಿಬ್ಬರ ಮದುವೆ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.