ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರು ಪ್ರಸ್ತುತ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ದ್ವಿಭಾಷಾ ಚಿತ್ರ ಲಿಗರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಲಿಗರ್ ಚಿತ್ರತಂಡ ಉಡುಗೊರೆಯೊಂದನ್ನು ನೀಡಲಿದ್ದಾರಂತೆ.
ಪುರಿ ಜಗನ್ನಾಥ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಮೂಲಕ ವಿಜಯ ದೇವರಕೊಂಡ ಅವರು ಬಾಲಿವುಡ್ ಪ್ರವೇಶಿಸಿದ್ದಾರೆ. ಇದರಲ್ಲಿ ಅನನ್ಯ ಪಾಂಡೆ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಲಿಗರ್ ಚಿತ್ರದ ನಿರ್ಮಾಪಕರು ವಿಜಯ್ ಅವರ ಜನ್ಮ ದಿನದ ಪ್ರಯುಕ್ತವಾಗಿ ಅವರ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ್ದಾರೆ.
ವಿಜಯ್ ದೇವರಕೊಂಡ ಅವರು ಈ ತಿಂಗಳ 9ರಂದು ತಮ್ಮ ಜನ್ಮ ದಿನವನ್ನು ಆಚರಿಸುತ್ತಿದ್ದಾರೆ. ಹಾಗಾಗಿ ಲಿಗರ್ ಚಿತ್ರತಂಡ ಈ ಚಿತ್ರದ ಪ್ರಚಾರ ಮಾಡಲು ಮುಂದಾಗಿದೆ. ಅದಕ್ಕಾಗಿ ಟೀಸರ್ ಅಥವಾ ಚಿತ್ರಕ್ಕೆ ಸಂಬಂಧಪಟ್ಟ ಬೇರೆಯಾವುದಾದರೂ ವಿಷಯವನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ.