Publish Date: Fri, 17 Jun 2022 (17:03 IST)
Updated Date: Fri, 17 Jun 2022 (17:04 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ತಂಡ ಭರ್ಜರಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ಕೊಟ್ಟಿದೆ.
ಚಿತ್ರದ ಟ್ರೈಲರ್ ಗಾಗಿ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಜೂನ್ 23 ರಂದು ವಿಕ್ರಾಂತ್ ರೋಣ ಟ್ರೈಲರ್ ಲಾಂಚ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.
ಜುಲೈ 28 ರಂದು ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ಥಿಯೇಟರ್ ನಲ್ಲಿ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದ್ದು, ತಿಂಗಳಿಗೂ ಮೊದಲೇ ಟ್ರೈಲರ್ ಪ್ರೇಕ್ಷಕರ ಮುಂದೆ ಬರಲಿದೆ.